ಗುರುವಾರ, ಸೆಪ್ಟೆಂಬರ್ 23, 2010

ನಮ್ ದ್ಯಾವೇಗೌಡ್ರು


ಪ್ರಿಯ ಗೆಳೆಯರೇ,


ಈಟ್ ಕ್ರಿಕೆಟ್, ಸ್ಲೀಪ್ ಕ್ರಿಕೆಟ್, ಡ್ರಿಂಕ್ ಕ್ರಿಕೆಟ್ ಅನ್ನುವ ಜಾಹೀರಾತು ನಿಮಗೆಲ್ಲ ನೆನಪಿರಬೇಕು. ಆದರೆ ಇವರ ವಿಷಯದಲ್ಲಿ ಸ್ವಲ್ಪ ಅದಲು ಬದಲಾಗುತ್ತೆ, ಇವರದು ಈಟ್ ಪಾಲಿಟಿಕ್ಸ್, ಸ್ಲೀಪ್ ಪಾಲಿಟಿಕ್ಸ್, ಡ್ರಿಂಕ್ ಪಾಲಿಟಿಕ್ಸ್. ಯಾರ ಬಗ್ಗೆ ಮಾತಾಡ್ತಾ ಇದ್ದೀನಿ ಗೊತ್ತಾಯ್ತಾ ನಮ್ ದೇವೇಗೌಡರ ಬಗ್ಗೆ. ಹೌದು, ದೇವೇಗೌಡರು ಈ ದೇಶ ಕಂಡ ಪಕ್ಕಾ ರಾಜಕಾರಣಿ. ಇವರು ಜಾತ್ಯಾತೀತ,ಧರ್ಮಾತೀತ ವ್ಯಕ್ತೀನಾ ಅಂತ ನಂಗೆ ಗೊತ್ತಿಲ್ಲ. ಆದರೆ ಗ್ರಾಮ ಪಂಚಾಯ್ತಿ ಎಲೆಕ್ಷನ್ನಿಂದ ಪಾರ್ಲಿಮೆಂಟ್ ಎಲೆಕ್ಷನ್ ವರೆಗೂ ಯಾವುದೇ ಎಲೆಕ್ಷನ್ ನಡೆದರೂ ಭೇದಭಾವ ತೋರಿಸದೆ ಸಕ್ರಿಯವಾಗಿ ಭಾಗವಹಿಸುವ ಏಕೈಕ ನಾಯಕ ದೇವೇಗೌಡರು. ಯಾವುದೇ ಸಭೆ- ಸಮಾರಂಭ ಎಲ್ಲೇ ಆಗಲಿ ಸದಾ ಕಾಲ "ದೇಶ"ದ ಕುರಿತು ಚಿಂತನೆ (ಮೀಡಿಯಾದವರು ಅದನ್ನು ನಿದ್ದೆ ಅಂತ ಕರೀತಾರೆ) ನಡೆಸೋ ಮಹಾನ್ ವ್ಯಕ್ತಿ ಇವರು.

ಕರ್ನಾಟಕದಲ್ಲಿ ಎಂಥೆಂಥ ಮಹಾನ್ ರಾಜಕಾರಣಿಗಳು ಜನ್ಮ ತಳೆದಿದ್ದರು ಕೂಡಾ ಅವರ್ಯಾರಿಗೂ ಪ್ರಧಾನಿ ಹುದ್ದೆಯ ಹತ್ತಿರಕ್ಕೂ ಸುಳಿಯೋದು ಸಾಧ್ಯ ಆಗಲಿಲ್ಲ. ಆದರೆ ನಮ್ಮ ದೇವೇಗೌಡರಿಗೆ ಮಾತ್ರ ಇದು ಬಯಸದೇ ಬಂದ ಭಾಗ್ಯ. ಅಷ್ಟೆಲ್ಲ ಹಿರಿಯ,ಮುತ್ಸದ್ದಿ ರಾಜಕಾರಣಿಗಳು ಇದ್ದರೂ ದೇವೇಗೌಡರು ಪ್ರಧಾನಿ ಆಗಿದ್ದು ಹೇಗೆ? ನಿಜವಾಗಲೂ ಅವರಿಗೆ ಅಷ್ಟು ಕೆಪಾಸಿಟಿ ಇತ್ತಾ? ಅಥವಾ ಅಲ್ಲೇನಾದ್ರೂ ಭಾರೀ ಹಣದ ಗೋಲ್ಮಾಲ್ ನಡೆದಿತ್ತಾ!!!!????

ನೋಡಿ (ಓದಿ) ಬ್ರೇಕ್ ನಂತರ ಅಲ್ಲಲ್ಲಾ....ಮುಂದಿನ ಪ್ಯಾರಾದಲ್ಲಿ.....


ದೇವೇಗೌಡರು ಪ್ರಧಾನಿ ಆಗಿದ್ದಾಗ ಒಂದೆರಡು ಜೋಕುಗಳು ಚಾಲ್ತಿಯಲ್ಲಿ ಇದ್ದವು. ಇದನ್ನು ನಿಮ್ಮಲ್ಲಿ ಕೆಲವರು ಈಗಾಗಲೇ ಕೇಳಿರಬಹುದು,ಓದಿರಬಹುದು. ಮೊದಲೇ ಗೊತ್ತಿದ್ದರೆ ಮೆಲುಕು ಹಾಕಿ, ಗೊತ್ತಿಲ್ಲದಿದ್ದರೆ ಓದಿನೋಡಿ.


ಮೊದಲ ಜೋಕು:

ದೆಹಲಿಯ ಪ್ರಖ್ಯಾತ ಹೋಟೆಲೊಂದರ ಸಭಾಭವನದಲ್ಲಿ ಯುನೈಟೆಡ್ ಫ್ರಂಟ್ ನಾಯಕರುಗಳಾದ ಜ್ಯೋತಿಬಸು, ಲಾಲು ಪ್ರಸಾದ್ ಯಾದವ್,ಹರ್ಕಿಶನ್ ಸಿಂಗ್ ಸುರ್ಜೀತ್, ದೇವೇಗೌಡ ಮುಂತಾದ ಪ್ರಖ್ಯಾತ ನಾಯಕರೆಲ್ಲ ಆ ಸಭೆಯಲ್ಲಿ ಸೇರಿದ್ದರು. ಪ್ರಧಾನಿ ಹುದ್ದೆಗೆ ಯಾರನ್ನು ತರಬೇಕು ಅನ್ನೋ ವಿಷಯದ ಬಗ್ಗೆ ಚರ್ಚೆ ನಡೆದಿತ್ತು. ಜ್ಯೋತಿಬಸು ಹೆಸರು ಎಲ್ಲರ ಬಾಯಲ್ಲೂ ಬಂತಾದರೂ ಅವರು ಸ್ವತಃ ಒಪ್ಪಲಿಲ್ಲ. ಇದೆ ವೇಳೆ ದೆಹಲಿಯ ಭಯಂಕರ ಬಿಸಿಲ ಅಬ್ಬರಕ್ಕೆ ಬಸವಳಿದಿದ್ದ ನಮ್ಮ ಲಾಲೂ ಯಾದವರಿಗೆ ಮೊಸರುವಡೆ (ತೈರುವಡೆ) ತಿನ್ನುವ ಹಂಬಲ ಆಯಿತು. ಸರಿ ಮೊದಲೇ ಆವಯ್ಯ ಸ್ಟ್ರೈಟ್ ಫಾರ್ವರ್ಡ್ ಆಸಾಮಿ ಸೀದಾ ಎದ್ದು ನಿಂತುಕೊಂಡು "ಅರೆ ದಹೀ ವಡಾ ಲಾವೋ, ದಹೀ ವಡಾ ಲಾವೋ" ಅಂತ ಕೂಗಿದರು. ಅಲ್ಲಿ ಸೇರಿದ್ದ ವಯೋ ವೃದ್ದ ನಾಯಕರಿಗೆ "ದಹೀ ವಡಾ" ಅಂದಿದ್ದು ದೇವೇಗೌಡ ಅಂತ ಕೇಳಿಸಿ ನಮ್ಮ ಗೌಡ್ರು ಪ್ರಧಾನಿ ಗದ್ದುಗೆ ಏರುವ ಅವಕಾಶ ಸಿಕ್ತು.

ಎರಡನೇ ಜೋಕು:

ಪಾರ್ಲಿಮೆಂಟಿನ ಬಳಿ ಸೇರಿದ್ದ ಯುನೈಟೆಡ್ ಫ್ರಂಟಿನ ನಾಯಕರುಗಳು ಗೊಂದಲದ ಸ್ಥಿತಿಯಲ್ಲಿದ್ದಾರೆ. ಜ್ಯೋತಿಬಸುರಂತಹ ಹಿರಿಯ ನಾಯಕರು ಪ್ರಧಾನಿ ಹುದ್ದೆ ನನಗೆ ಬೇಡ ಅಂತ ಹೇಳಿ ಇವರನ್ನೆಲ್ಲ ಗೊಂದಲದಲ್ಲಿ ಸಿಲುಕಿಸಿದ್ದಾರೆ. ಮುಂದಿನ ಹಾದಿ ಏನು? ಯಾರನ್ನು ಸರ್ವ ಸಮ್ಮತ ನಾಯಕನನ್ನಾಗಿ ಆರಿಸುವುದು ಅಂಥ ಎಲ್ಲ ನಾಯಕರೂ ಯೋಚನೆ ಮಾಡ್ತಾ ಇದ್ದಾರೆ. ಹೀಗೆ ಎಲ್ಲರೂ ಚಿಂತಾಮಗ್ನರಾಗಿದ್ದಾಗ ಒನ್ಸ್ ಎಗೈನ್ ನಮ್ಮ ನಿಮ್ಮೆಲ್ಲರ ನೆಚ್ಚಿನ ನಾಯಕ ಲಾಲೂಜಿ ಅಲ್ಲಿಗೆ ಬಂದರು. ವಾತಾವರಣವನ್ನು ತಿಳಿಯಾಗಿಸುವ ಸಲುವಾಗಿ ಒಂದು ಹಿಂದಿ ಗಾದೆ ಹೇಳಿದರು " ಘೋಡಾ ಹೇ ಮೈದಾನ್ ಹೇ, ಆಪ್ ಲೋಗ ಆರಾಮ್ ಸೆ ರಹೋ " ಅಂದ್ರು. ಹಿರಿಯ ನಾಯಕರೊಬ್ಬರಿಗೆ "ಘೋಡಾ" ಅಂದದ್ದು "ಗೌಡ" ಅಂತ ಕೇಳಿಸಿ ದೇವೇಗೌಡರು ಪ್ರಧಾನಿ ಆದರು.






14 ಕಾಮೆಂಟ್‌ಗಳು:

  1. ಹೌದಾ!!!!, ಆದರೆ ಒಂದಂತು ನಿಜ ಅವರ ಕಚ್ಚೆ ಭದ್ರವಾಗಿದೆ....

    ಪ್ರತ್ಯುತ್ತರಅಳಿಸಿ
  2. Sir avrdu jathyatheeta janatha dala alla jateeya janatha dala..yake andre deve gowdru yavaglu jati dharma da lekkacharadalle irthare, hege nanna bele beyskolli antha..paapa ee jaati inda atheeta aada gowdru mundina janmadalli inthade ondu jathi(dharma)lli huttthini antha pramaana maadbittidare..

    ಪ್ರತ್ಯುತ್ತರಅಳಿಸಿ
  3. ಪ್ರಬುದ್ದ ಜಾತೀಯತೆ ಮನಸಿನ ಜಾತ್ಯತೀತ ರಾಜಕಾರಣಿ

    ಪ್ರತ್ಯುತ್ತರಅಳಿಸಿ
  4. ಪ್ರತ್ಯುತ್ತರಗಳು
    1. ನಿಮ್ಮ ಮಾತನ್ನು ನಾನು ಒಪ್ಪುತ್ತೇನೆ. ಯಾರು ಏನೇ ಹೇಳಿದರೂ ದೇವೇಗೌಡರು ಕರ್ನಾಟಕದ ಕೀರ್ತಿಪುರುಷ ಎಂಬಲ್ಲಿ ಎರಡು ಮಾತಿಲ್ಲ. ಕನ್ನಡ ನಾಡಿನ ಹಳ್ಳಿಯ ಹೈದನೊಬ್ಬ ದೇಶದ ಪ್ರಧಾನಿಯಾಗುವುದು ಸುಮ್ಮನೆ ಮಾತಲ್ಲ.

      ಅಳಿಸಿ
  5. ಚೆನ್ನಾಗಿದೆ ವಿಜಯ. ಅಂದಹಾಗೆ ಹಾಸನಜಿಲ್ಲೆಯಲ್ಲಿ ಹೆರಗು ಎಂಬ ಊರಿದೆ.ನಿಮಗೂ ಅಲ್ಲಿಗೂ......?

    ಪ್ರತ್ಯುತ್ತರಅಳಿಸಿ
    ಪ್ರತ್ಯುತ್ತರಗಳು
    1. ಹೌದು ಶ್ರೀಧರ್ ಸರ್, ನಾನು ಹಾಸನ ಜಿಲ್ಲೆಯ ದುದ್ದ ಹೋಬಳಿ ಹೆರಗು ಗ್ರಾಮದವನು.

      ಅಳಿಸಿ
    2. Sri vijaya Please send me a mail., So that we will be in touch.My mail Id is vedasudhe@gmail.com
      Pl visit vedasudhe.com
      -Hariharapurasridhar, Hassan

      ಅಳಿಸಿ
  6. hahaha masth comedy..:) devegowdru obba buddivanta rajakarani annodralli 2 mate illa haage kutatantra rajakarani adu illade idre janatadala paksha yavatto moole serodu.karnatakadinda ayke ada yekaika pradhana mantri devegowdru.ea vayassinallu avrigiro utsaha,paksha belesbeku anno hambala yellavanna evagin youths nodi kalibekirodu tumba ide.:)i truly enjoy reading your article.:)

    Usha.H.M

    ಪ್ರತ್ಯುತ್ತರಅಳಿಸಿ