ಮಂಗಳವಾರ, ಜುಲೈ 26, 2011

ಇಂದಿಗೆ ಒಂದು ವರ್ಷದ ಹರ್ಷ

                          ನನ್ನೆಲ್ಲಾ ನಲ್ಮೆಯ ಗೆಳೆಯರಿಗೆ ನನ್ನ ಹೃತ್ಪೂರ್ವಕ ನಮಸ್ಕಾರಗಳು. ಇಂದು ೨೭ನೇ  ಜುಲೈ ೨೦೧೧. ಇಂದಿಗೆ ನನ್ನ "ಮನದ ಮಾತು" ಅಕ್ಷರ ರೂಪದಲ್ಲಿ ಮೂಡಲಾರಂಭಿಸಿ ಒಂದು ವರ್ಷ ಪೂರೈಸಿದೆ. ೨೭  ಜುಲೈ ೨೦೧೦ ರಂದು ನನ್ನ ಗೆಳೆಯನೊಬ್ಬನ ಇಂಗ್ಲಿಷ್ ಬ್ಲಾಗ್ ನೋಡಿ ನಾನೂ ಕನ್ನಡದಲ್ಲಿ ಒಂದು ಬ್ಲಾಗ್ ಬರೆಯೋಣ ಎಂದು ಪ್ರಾರಂಭಿಸಿದೆ. ನಾನು ಬ್ಲಾಗ್ ಬರೆಯಲು ಆರಂಭಿಸಿದ ದಿನದಿಂದ ಇಂದಿನವರೆಗೆ ಹಲವಾರು ಹಿರಿಯ ಬರಹಗಾರರು, ಗೆಳೆಯರು ನನ್ನನ್ನು ಬೆಂಬಲಿಸುತ್ತಾ, ನನ್ನ ತಪ್ಪಿದ್ದಾಗ ತಿದ್ದುತ್ತಾ, ಉತ್ತಮ ಬರಹಗಳನ್ನು ಪ್ರಶಂಶಿಸುತ್ತಾ, ಸ್ವಾರಸ್ಯಕರ ಚರ್ಚೆಗೆ ಹಚ್ಚುತ್ತಾ ನನಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನೆರವಾಗಿದ್ದಾರೆ. ಅವರೆಲ್ಲರ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಋಣಿ.  


                        ಇತ್ತೀಚಿಗೆ ಹಲವಾರು ದಿನಗಳಿಂದ ನಾನು ಬರವಣಿಗೆಯಲ್ಲಿ ಹೆಚ್ಚಿಗೆ ತೊಡಗಿಸಿಕೊಳ್ಳಲಾಗಿಲ್ಲ. ಇನ್ನು ಮುಂದೆ ಸಾಧ್ಯವಾದಷ್ಟೂ ನಿರಂತರವಾಗಿ ಬರೆಯಬೇಕೆಂದುಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೀತಿ ಹೀಗೆ ಇರಲಿ ಎಂದು ಪ್ರಾರ್ಥಿಸುವೆ. 

ವಂದನೆಗಳೊಂದಿಗೆ,


ವಿಜಯ್ ಹೆರಗು 6 ಕಾಮೆಂಟ್‌ಗಳು:

 1. ಅಭಿನಂದನೆಗಳು.... ಶುಭವಾಗಲಿ

  ಪ್ರತ್ಯುತ್ತರಅಳಿಸಿ
 2. congrats vijay, keep moving,i want to see your blog list in famous writers list,keeping on rocking,write more & more.

  ಪ್ರತ್ಯುತ್ತರಅಳಿಸಿ
 3. ಮೆಚ್ಚಿ ಹರಸಿದ ನಿಮ್ಮೆಲ್ಲರಿಗೂ ನನ್ನ ನಮನಗಳು :)

  ಪ್ರತ್ಯುತ್ತರಅಳಿಸಿ
 4. ತುಂಬಾ ನಿಧಾನವಾಗಿ ಧನ್ಯವಾದಗಳನ್ನು ತಿಳಿಸುತ್ತಿರುವುದಕ್ಕೆ ಕ್ಷಮೆಯಿರಲಿ ತಮ್ಮ ಬರಹ ಇನ್ನು ಹೆಚ್ಚು ಈ ಬ್ಲಾಗ್ನಲ್ಲಿ ಬರಲಿ ಎಂದು ಹಾರೈಸುವ.
  ನಿಮ್ಮ
  ಅನಂತ

  ಪ್ರತ್ಯುತ್ತರಅಳಿಸಿ
 5. ಪ್ರೀತಿಯ ಅನಂತ್,

  ಧನ್ಯವಾದಗಳು, ನಿಮ್ಮ ಪ್ರೀತಿ ಸದಾ ಹೀಗೇ ಇರಲಿ.

  ಪ್ರತ್ಯುತ್ತರಅಳಿಸಿ