ಅವನು: ನಿನ್ನೆ ರಾತ್ರಿ ಕನಸಿನಲ್ಲಿ ನೀನು ಸತ್ತುಹೋಗಿದ್ದೆ
ನಾನು: ಹೌದಾ!!?? ಸತ್ತೇ ಇಲ್ವಲ್ಲ ಈ ಬಡ್ಡಿಮಗ ಅಂತ ಬೇಜಾರೆನೋ ತಮಗೆ
ಅವನು: ಇಲ್ಲ ಕಣೋ ನಿಜವಾಗಲೂ ಆ ಥರ ಕನಸು ಬಿದ್ದಿತ್ತು
ನಾನು: ನೀನು "ಜೋಗಿ" ಸ್ಟೈಲಲ್ಲಿ ನನ್ ಹೆಣದ ಮುಂದೆ ಡ್ಯಾನ್ಸ್ ಮಾಡ್ತಿದ್ಯಾ? ಅಲ್ಲ ಕಣೋ ನಾನೇನೋ ಸಾವು ಅನ್ನೋ ವಿಷಯದ ಬಗ್ಗೆ ಒಂದು ಕವನ ಗೀಚಿದ್ರೆ ನೀನು ನನ್ನ ಸಾವಿಗೆ ಸ್ಕೆಚ್ ಹಾಕ್ತಿಯಲ್ಲೋ ಸುಂದರಾಂಗ.
ಹೀಗೇ ಸಾಗಿತ್ತು ನನ್ನ ಹಾಗೂ ನನ್ನ ಕಸಿನ್ ನರಸಿಂಹನ್ ಚಾಟಿಂಗು ಕೆಲವು ದಿನಗಳ ಹಿಂದೆ. ಅವ್ನು ಅಲ್ಲೆಲ್ಲೋ ದೂರದಲ್ಲಿ ಡೆನ್ಮಾರ್ಕಿನ ಕೋಪನ್ ಹೇಗನ್ನಲ್ಲಿ ಕುಳಿತು ನನ್ ಜೊತೆ ಹರಟುತ್ತಿದ್ದ. ಸಾವಿನ ಕುರಿತು ನಮ್ಮ ಚರ್ಚೆ ಹೀಗೆ ಹಾಸ್ಯಮಯವಾಗಿ ಸಾಗಿತ್ತು. ಅಷ್ಟರಲ್ಲಿ ಅವನು ಬೇರಾವುದೋ ಕೆಲಸದಲ್ಲಿ ಬ್ಯುಸಿ ಆದ. ಅಲ್ಲಿಗೆ ನಮ್ಮ ಚಾಟ್-ಚಟಕ್ಕೆ ಬ್ರೇಕ್ ಬಿತ್ತು.
ಈ ಎಪಿಸೋಡ್ ಇಲ್ಲಿಗೆ ಮುಗಿದಿದ್ದರೆ ಚೆನ್ನಾಗಿತ್ತು. ಆದರೆ ಸಾವು ಅನ್ನುವ ಸಬ್ಜೆಕ್ಟು ಅಷ್ಟು ಸುಲಭವಾಗಿ ಮರೆಯಾಗುವ ವಿಷಯ ಅಲ್ಲ. ಬಿಟ್ಟೆನೆಂದರೂ ಬಿಡದೇ ಕಾಡುವ ಮಾಯೆ ಈ ಸಾವು. ನಾವು ಸಾಮಾನ್ಯವಾಗಿ ಎಲ್ಲರ ಮನೇಲೂ ದಿನ ನೋಡ್ತಾನೆ ಇರ್ತೀವಿ, ಗಂಡ ಹೆಂಡತಿಗೆ, ಹೆಂಡತಿ ಗಂಡನಿಗೆ ಅಥವಾ ಅಪ್ಪ/ಅಮ್ಮ ಮಗನಿಗೆ ಹೀಗೆ ತುಂಬಾ ಹತ್ತಿರದವರೇ ಎಲ್ಲಾದರು ಹೋಗಿ ಸಾಯಿ ಅಂತಾನೋ ಸತ್ತಾದರೂ ಹೋಗು ಅಂತಾನೋ ಬೈತಿರ್ತಾರೆ. ನಿಜವಾಗಿಯು ಹಾಗೇನಾದ್ರೂ ಸತ್ತರೆ ಅವರಿಗಾಗುವ ನೋವು ಅಷ್ಟಿಷ್ಟಲ್ಲ. ತೀರಾ ಹತ್ತಿರದವರು ಸತ್ತಾಗ ಅದರ ನೋವು ಮರೆಯೋಕೆ ವರ್ಷಗಳೇ ಹಿಡಿಯುತ್ತವೆ.ಇದೇ ಥರ ಅವತ್ತೆಲ್ಲಾ ನನ್ನ ಮನಸ್ಸಿನ ತುಂಬಾ ಮನುಷ್ಯ ಎಂಬ ಪ್ರಾಣಿಯ ಪ್ರಾಣದ ಬಗ್ಗೆ ತರಹೇವಾರಿ ಯೋಚನೆಗಳು ಕಾಡಿದವು.
ಅರೆ ಇದೇನಿದು ಯಾರೋ ನನ್ನ ಕಡೆಗೆ ಬರ್ತಾ ಇದ್ದಾರಲ್ಲ....ಯಾಕೋ ಎಲ್ಲಾ ಮಸುಕು ಮಸುಕಾಗಿ ಕಾಣಿಸ್ತಾ ಇದೆ. ಅಯ್ಯೋ ದೇವರೇ ಏನಪ್ಪಾ ಇದು ಯಮರಾಜ ಬಂದೇ ಬಿಟ್ಟ ಅವನ ಅದೇ ಹಳೇ ಮಾಡಲ್ ಗಾಡಿ (ಕೋಣ) ಮೇಲೆ ಕೂತ್ಕೊಂಡು.
ಯಮರಾಜ: ಎಲೈ ಯುವಕ ನಡೆ ನಡೆ ಹೊರಡೋಣ...ನರಕಕ್ಕೆ
ನಾನು: ಅಲ್ಲಾ ಗುರುವೇ ನನಗೆ ಇವಾಗಿನ್ನು ಮೂವತ್ತು ವರ್ಷ ತುಂಬಿದೆ.... ಇನ್ನು ಆಯಸ್ಸು ಬಾಕಿ ಇದೆ. ಎಲ್ಲೋ ನಿಂಗೆ ಅಡ್ರಸ್ ತಪ್ಪಿ ಹೋಗಿದೆ. ಅದರಲ್ಲಿ ನಿಂದೇನೂ ತಪ್ಪಿಲ್ಲ ಬಿಡು ಬೆಂಗಳೂರು ತುಂಬಾ ಬೆಳೆದುಬಿಡ್ತು...ಕನಫ್ಯೂಸ್ ಆಗೋದು ಕಾಮನ್ನು.
ಯಮರಾಜ: ನಿನ್ನ ಹೆಸರು ವಿಜಯ್ ಅಲ್ಲವೇ, ನಾನು ಸರಿಯಾದ ವಿಳಾಸಕ್ಕೆ ಬಂದಿದ್ದೇನೆ. ನನ್ನನ್ನು "ದಾರಿ ತಪ್ಪಿದ ಮಗ" ಎಂದು ತಿಳಿದೆಯಾ ಮೂಢ!!
ನಾನು : ಇಲ್ಲಾ ಬಾಸು ಇದೇ ಬೀದೀಲಿ ಕೊನೆ ಮನೇಲಿ ಒಬ್ರು ವಿಜಿ ಅಂತ ಇದ್ದಾರೆ..ಲೇಡಿಸು....ನೋಡಕ್ಕೂ ಚೆನ್ನಾಗಿದ್ದಾರೆ ಬಾಸು, ನೀನು ಅವರನ್ನ ಹುಡುಕ್ತಾ ಇರ್ಬೇಕು.
ಯಮರಾಜ : ನೋಡು ನೀನು ನನ್ನ ಬಳಿ ಆಟ ಕಟ್ಟಬೇಡ ನಾನು ಬಂದಿರುವುದು ನಿನಗಾಗಿ, ಆ ಮಹಿಳೆಗಾಗಿ ಅಲ್ಲ.
ನಾನು : ಅಲ್ಲಾ ಗುರು ಒಸೀ ಯೋಚನೆ ಮಾಡು, ಆ ಇಂದ್ರ ಬಡ್ಡೀಮಗ ಸ್ವರ್ಗದಲ್ಲಿ ರಂಭೆ, ಊರ್ವಶಿ, ಮೇನಕೆ ಅಂತ ಸಿಕ್ ಸಿಕ್ಕಿದ ಸುಂದರಿಯರ್ನ ಸುತ್ತಾ ಮುತ್ತಾ ಸಾಕ್ಕಂಡಿರುವಾಗ ನೀನು ಒಂದೂ ಹುಡುಗಿ ಇಲ್ದೆ ಹೆಂಗಿದ್ಯಾ ಸ್ವಾಮೀ. ಈಗಲೂ ನಿನಗೇನು ಕಮ್ಮಿ ಹೇಳು...ಒಳ್ಳೆ ಕಟ್ಟುಮಸ್ತಾಗಿ ಪೈಲ್ವಾನ್ ಇದ್ದಂಗೆ ಇದ್ದೀಯ..
ಯಮರಾಜ: ಸಾಕು ಮಾಡು ನಿನ್ನ ಹೊಗಳಿಕೆಯ ಮಾತನ್ನು, ನಿನ್ನ ಹೊಗಳಿಕೆಯ ಮಾತಿಗೆ ನಾನು ಮರುಳಾಗಲಾರೆ
ನಾನು: ಬಾಸೂ ನಾನು ಹೇಳ್ತಾ ಇರೋದು ನಿಜ ಬಾಸು....ನೀನು ಒಳ್ಳೆ ಹೀರೋ ಥರ ಇದ್ದೀಯಾ ಬಾಸು...ನಿಂಗೆ ಒಂದು ಒಳ್ಳೆ ಐಡಿಯಾ ಕೊಡ್ತೀನಿ. ನನ್ ಬದ್ಲು ಆ ವಿಜೀನ ಕರ್ಕೊಂಡು ಹೋಗು ನಾನು ಇನ್ನೊಂದಷ್ಟು ವರ್ಷ ಆದಮೇಲೆ ನಿನ್ ಹತ್ರ ಬರ್ತೀನಿ.
ಯಮರಾಜ : ನೀನು ನನಗೆ ಓಲೈಸಿ ನಿನ್ನ ಜೀವ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಡ..
ನಾನು : ಏನ್ ಗುರು ನೀನೂ ನನ್ನ ಅಪಾರ್ಥ ಮಾಡ್ಕೊಂಡು ಬಿಟ್ಟೆ ನನ್ನ. ನಂ ಆಫೀಸಲ್ಲೂ ಅಷ್ಟೇ ನಂ ಬಾಸೂ ನಿನ್ ಹಂಗೆ ನನ್ನ ಶ್ಯಾನೆ ತಪ್ಪು ತಿಳ್ಕಂಡವ್ರೆ .... ನಂಗೆ ನನ್ ಜೀವದ್ ಮೇಲೆ ಆಸೆ ಅಲ್ಲ ಅದು ನಿನ್ ಮೇಲಿರೋ ಅಭಿಮಾನ ಗುರೂ.....ನಂ ರಾಜ್ಕುಮಾರ್ ಅಣ್ಣನ್ನ ಬಿಟ್ರೆ ನಾನ್ ನಿನ್ನೆ ಲೈಕ್ ಮಾಡೋದು ಗುರು ದೇವರಾಣೆಗೂ.
ಯಮರಾಜ : ನಿನ್ನ ಹೊಗಳಿಕೆಯ ಗಾಳಕ್ಕೆ ನಾನು ಸಿಲುಕುವವನಲ್ಲ, ನಿನ್ನ ಜಾಣ್ಮೆಯನ್ನು ನನ್ನ ಮುಂದೆ ಪ್ರದರ್ಶಿಸಬೇಡ...
ಯಮರಾಜ ಜೋರಾಗಿ ನನ್ ಕಡೆ ಹಗ್ಗ (ಯಮಪಾಶ) ಎಸೆದ .......
>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>.........................
ನಾನು ಕಣ್ಬಿಟ್ಟೆ ....... ಆಗ್ಲೇ ಬೆಳಿಗ್ಗೆ ಒಂಭತ್ತು ಘಂಟೆ...... ಆಫೀಸಿಗೆ ಟೈಮಾಯ್ತು...... ಬಾಸ್ ಹತ್ರ ಇವತ್ತೂ ಬೈಸ್ಕೊಬೇಕು ಛೇ !!!

ನಾನು : (ಏನಪ್ಪಾ ಮಾಡೋದು ಈ ಪಾರ್ಟಿ ಯಾವುದಕ್ಕೂ ಜಗ್ತಾ ಇಲ್ಲ) ಅಲ್ಲಯ್ಯಾ ಯಮಧರ್ಮರಾಯ ನೀನೇನಾದ್ರೂ ನನಗೆ ಜೀವದಾನ ಮಾಡಿದರೆ ನಿನಗೆ ಭಾರೀ ಭರ್ಜರೀ ಉಡುಗೊರೆ ಕೊಡುತ್ತೇನೆ. ಸದ್ಯದಲ್ಲೇ ನಮ್ಮ ಕೇಂದ್ರ ಸರ್ಕಾರ ಸ್ವಿಸ್ ಬ್ಯಾಂಕಿನಲ್ಲಿ ನಮ್ಮ ಭಾರತೀಯರು ತೊಡಗಿಸಿರೋ (ಅಡಗಿಸಿರೋ) ಕಪ್ಪುಹಣ ವಾಪಸ್ ತರ್ತಾರೆ. ಹಾಗೆ ಅವರು ತಂದು ಕೊಡೋ ದುಡ್ಡನ್ನು ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಗೂ ಹಂಚ್ತಾರೆ......ಆಗ ನಂಗೂ ಒಂದಷ್ಟು ಲಕ್ಷಾನೋ - ಕೋಟಿನೋ ಬರುತ್ತೆ ಅದೆಲ್ಲಾ ನಿಂಗೆ ಕೊಟ್ಬಿಡ್ತೀನಿ ಈಗ ಸದ್ಯಕ್ಕೆ ನನಗೆ ಪ್ರಾಣಭಿಕ್ಷೆ ಕೊಡು ಗುರುವೇ.....
ಯಮರಾಜ : ಅಯ್ಯೋ ..... ಗುರುವೇ ನಿಂಗೆ ಕೈಮುಗೀತೀನಿ ದಯವಿಟ್ಟು ನನ್ ಜೊತೆ ಬಾ ಈಗ.... ನಿಮ್ಮ ಸರ್ಕಾರದವ್ರು ಕಪ್ಪುಹಣ ವಾಪಸ್ ತರೋ ಹೊತ್ತಿಗೆ ನಾನು ಬದುಕಿರ್ತೀನೋ ಇಲ್ವೋ ನಂಗೇ ಗೊತ್ತಿಲ್ಲಾ....ಸುಮ್ನೆ ನಡೀ.......ಯಮರಾಜ ಜೋರಾಗಿ ನನ್ ಕಡೆ ಹಗ್ಗ (ಯಮಪಾಶ) ಎಸೆದ .......